ಮಸ್ಕಿ ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ 8 ನೇ ತರಗತಿಯ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ.
ಗಂಗಪ್ಪ ಮಲ್ಲಯ್ಯ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಬಾಲಕ ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಲಿಂಗಸೂಗುರು ತಾಲ್ಲೂಕಿನ ಆನ್ವರಿ ಗ್ರಾಮದ ಬಾಲಕ ಗಂಗಪ್ಪ ಮಲ್ಲಯ್ಯ, ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಹೋದ ಬಾಲಕ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿನ ಗಿಡಕ್ಕೆ ನೇಣು ಹಾಕಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.