ಕರ್ನಾಟಕ ಹೈಕೋರ್ಟ್ನಿಂದ ಶಾಲಾ ತರಗತಿಯಲ್ಲಿ ಹಿಜಾಬ್ ಬ್ಯಾನ್ ತೀರ್ಪಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಂದು ಮೇಲ್ಮನವಿ ದಾಖಲಾಗಿದೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ದಾಖಲಿಸಿದೆ.
ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂನ ಮೂಲಭೂತ ಆಚರಣೆಯಲ್ಲ ಎಂದು ತೀರ್ಪು ನೀಡಿತ್ತು. ಇದೀಗ, “ಮುಸ್ಲಿಂ ವೈಯಕ್ತಿಕ ಬೋರ್ಡ್, ಕರ್ನಾಟಕ ಹೈಕೋರ್ಟ್ ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ. ಕುರಾನ್ನಲ್ಲಿ ತಲೆ ಮತ್ತು ಕತ್ತನ್ನು ಮುಚ್ಚಿಕೊಳ್ಳಬೇಕೆಂದು ಹೇಳಲಾಗಿದೆ. ಜಗತ್ತಿನಾದ್ಯಂತ ಮುಸ್ಲಿಂ ಮಹಿಳೆಯರು ಹಿಜಾಬ್ ಅನ್ನು ಧರಿಸುತ್ತಿದ್ದಾರೆ. ಪ್ರವಾದಿ ಮಹಮ್ಮದರ ಬೋಧನೆಯಲ್ಲೂ ಈ ಬಗ್ಗೆ ಉಲ್ಲೇಖವಿದೆ” ಎಂದು ಹೇಳಿ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದೆ.
ಕರ್ನಾಟಕ ರಾಜ್ಯದ ಶಾಲಾ ತರಗತಿಯ ಒಳಗಡೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕುಳಿತುಕೊಳ್ಳುವಂತಿಲ್ಲ ಎಂಬ ಸರ್ಕಾರದ ಆದೇಶವನ್ನು ಹೈಕೋರ್ಟ್ ಮಾರ್ಚ್ 15 ರಂದು ಒಪ್ಪಿಕೊಂಡಿತ್ತು. ಈ ಆದೇಶದ ವಿರುದ್ಧ ವಿದ್ಯಾರ್ಥಿನಿಯರು ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಪರೀಕ್ಷೆ ಹಾಗೂ ಶಾಲಾ ತರಗತಿಯಲ್ಲಿ ಹಿಜಾಬ್ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ.