ಬೆಂಗಳೂರು: ರಾಜ್ಯದಲ್ಲಿ ಭ್ರೂಣಲಿಂಗಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಉಷಾರಾಣಿ ಬಂಧಿತ ಆರೋಪಿ.
ಆಕೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆದ್ರೆ ಆಕೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಳು. ಈ ಆಧಾರದ ಮೇಲೆ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವೆರೆಗೆ ಸುಮಾರು ೧೧ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿ ಬ್ರೋಕರ್ ಪುಟ್ಟರಾಜು ಸಂಬಂಧಿ ಆಗಿದ್ದು, ಈ ಹಿನ್ನೆಲೆಯಲ್ಲಿ ಆಕೆಯನ್ನು ಅರೆಸ್ಟ್ ಮಾಡಿದ್ದಾರೆ.