ಬೆಂಗಳೂರು: ಕನ್ನಡದ ಹೆಸರಾಂತ ಹಾಸ್ಯ ನಟ ನಾಗಭೂಷಣ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಹುಕಾಲದ ಗೆಳತಿ, ನಟಿ ಪೂಜಾ ಪ್ರಕಾಶ್ ಜೊತೆ ಇಂದು ಬೆಳಗಾವಿಯಲ್ಲಿ ಅವರು ಮದುವೆ ಆಗಿದ್ದಾರೆ. ಡಾಲಿ ಧನಂಜಯ್ ಸೇರಿದಂತೆ ಹಲವಾರು ಕಲಾವಿದರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ.
ಟಗರು ಪಲ್ಯ ಸೇರಿದಂತೆ ಅನೇಕ ಚಿತ್ರಗಳಿಗೆ ನಾಯಕನಾಗಿ ನಟಿಸಿರುವ ನಾಗಭೂಷಣ್, ನಾನಾ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಇವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಸಿನಿಮಾವನ್ನು ಡಾಲಿ ಧನಂಜಯ್ ಅವರೇ ನಿರ್ಮಾಣ ಮಾಡುತ್ತಿರುವುದು ವಿಶೇಷ.
ನಾಗಭೂಷಣ್ ಮದುವೆ ಆಗುತ್ತಿರುವ ಪೂಜಾ ಪ್ರಕಾಶ್ ಚಿತ್ರಕಲೆ ಮತ್ತು ಗ್ರಾಫಿಕ್ಸ್ ಡಿಸೈನ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಂದು ಬೆಳಗಾವಿಯಲ್ಲಿ ಇವರ ವಿವಾಹ ನಡೆಯಲಿದ್ದು, ಫೆಬ್ರವರಿ 2 ರಂದು ಮೈಸೂರಿನಲ್ಲಿ ಆರತಕ್ಷತೆ ನಡೆಯಲಿದೆ.