ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಿದ್ದಾರೆ.
ಚುನಾವಣಾ ಫಲಿತಾಂಶ ಬಂದ 1 ತಿಂಗಳು 10 ದಿನದ ಬಳಿಕ ರಾಜೀನಾಮೆ ಬಗ್ಗೆ ಮೊದಲ ಬಾರಿಗೆ ಕಟೀಲ್ ಅವರು ಹೇಳಿದ್ದಾರೆ.
ನನ್ನ ಅವಧಿ ಮುಗಿದಿದೆ, ಹೀಗಾಗಿ ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದ್ದೇನೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದೇನೆ, ಲಿಖಿತ ಮತ್ತು ಮೌಖಿಕವಾಗಿ ರಾಜೀನಾಮೆ ಸಲ್ಲಿಸಿದ್ದೇನೆ
ಎಂದು ಕಟೀಲ್ ಅವರು ಬಳ್ಳಾರಿಯಲ್ಲಿ ಹೇಳಿದ್ದಾರೆ.
ADVERTISEMENT
ADVERTISEMENT