ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಬಿಜೆಪಿ ಘಟಕ ಮಾಧ್ಯಮಗಳಿಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು.
ಬಳ್ಳಾರಿಯಲ್ಲಿ ವಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ, ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದೆ
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗಿದೆ
ಎಂದು ನಳಿನ್ ಕುಮಾರ್ ಕಟೀಲ್ ಅವರು ಸ್ಪಷ್ಟಪಡಿಸಿದ್ದಾರೆ.
ADVERTISEMENT
ADVERTISEMENT