ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕನ ವಿರುದ್ಧ ನಾಗ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿದ್ದನ್ನು ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಾಗ್ಪುರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶೇಖ್ ಹುಸೇನ್ ಅವರು ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದರು.
ಕಳೆದ ರಾತ್ರಿ ಶೇಖ್ ಹುಸೇನ್ ವಿರುದ್ಧ ದಾಖಲಾದ ಪ್ರಕರಣದಲ್ಲಿ ಆಕ್ಷೇಪಾರ್ಹ ಕೃತ್ಯ ಮತ್ತು ಉದ್ದೇಶಪೂರ್ವಕ ಅವಮಾನ, ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಆರೋಪಗಳನ್ನು ಪಟ್ಟಿ ಮಾಡಲಾಗಿದೆ. ನಾಗಪುರ ಬಿಜೆಪಿಯು ಹುಸೇನ್ ವಿರುದ್ಧ ದೂರು ನೀಡಿದೆ.
ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿರುವ ಕುರಿತು ಸೋಮವಾರದಿಂದ ದೇಶಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.