ದೇಶದಾದ್ಯಂತ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಮೆಟ್ರೋ ನಗರ ಎಂಬ ಕುಖ್ಯಾತಿಗೆ ರಾಷ್ಟ್ರ ರಾಜಧಾನಿ ದೆಹಲಿ ಪಾತ್ರವಾಗಿದೆ. ಇಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಎನ್ಸಿಆರ್ಬಿಯ ಇತ್ತೀಚಿನ ವರದಿ ತಿಳಿಸಿದೆ.
ದೆಹಲಿಯಲ್ಲಿ 2021 ರಲ್ಲಿ ಮಹಿಳೆಯರ ವಿರುದ್ಧದ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ಕ್ಕೆ ಹೋಲಿಸಿದರೆ ಶೇ 40 ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ. 2020ರಲ್ಲಿ 9,782 ಆಗಿತ್ತು ಎಂದು ಅಂಕಿಅಂಶಗಳು ತೋರಿಸಿವೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ನೀಡಿರುವ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಇತರೆ ಎಲ್ಲಾ 19 ಮಹಾನಗರಗಳ ಪೈಕಿ ಒಟ್ಟು ಅಪರಾಧಗಳ ಶೇ 32.20 ರಷ್ಟಿದೆ.
ಇದನ್ನೂ ಓದಿ : ಶಿವಮೊಗ್ಗ : ಅಪ್ರಾಪ್ತೆ ಮೇಲೆ ಅತ್ಯಾಚಾರ – ವೃದ್ಧನಿಗೆ ಜೀವಾವಧಿ ಶಿಕ್ಷೆ
ದೆಹಲಿ ನಂತರ ವಾಣಿಜ್ಯ ನಗರಿ ಮುಂಬೈನಲ್ಲಿ 5,543 ಪ್ರಕರಣಗಳು ವರದಿಯಾಗಿವೆ. ನಂತರದ ಸ್ಥಾನದಲ್ಲಿರುವ ಬೆಂಗಳೂರಿನಲ್ಲಿ 3,127 ಪ್ರಕರಣಗಳು ದಾಖಲಾಗಿವೆ. ಮುಂಬೈ ಮತ್ತು ಬೆಂಗಳೂರು 19 ಮಹಾನಗರಗಳ ಪೈಕಿ ಒಟ್ಟು ಅಪರಾಧಗಳಲ್ಲಿ ಕ್ರಮವಾಗಿ ಶೇ 12.76 ಮತ್ತು ಶೇ 7.2 ರ ಪ್ರಮಾಣ ಹೊಂದಿವೆ.
ರಾಷ್ಟ್ರ ರಾಜಧಾನಿಯೇ ಮಹಿಳೆಯರಿಗೆ ಅಸುರಕ್ಷಿತ :
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ)ಯ ಇತ್ತೀಚಿನ ವರದಿ ಪ್ರಕಾರ, 5,901 ಪ್ರಕರಣಗಳು ದಾಖಲಾಗುವುದರೊಂದಿಗೆ ಕಳೆದ ವರ್ಷ 19 ಮಹಾನಗರಗಳ ಪೈಕಿ ಅತಿ ಹೆಚ್ಚು ಅಪಹರಣ ಪ್ರಕರಣಗಳು ದೆಹಲಿಯಲ್ಲಿ ದಾಖಲಾಗಿವೆ. ಇದಲ್ಲದೆ, 2020 ರಲ್ಲಿ 5,475 ಪ್ರಕರಣಗಳು ಮತ್ತು 2019 ರಲ್ಲಿ 4,011 ಅಪಹರಣ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ : ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಶಾಸಕನ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ