ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟಿಸಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸ್ವಂತ ಅಥವಾ ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಾಗ ಸಲುವಾಗಿ ಮಾರ್ಷಲ್ ಮತ್ತು ಪೊಲೀಸರ ನೆರವನ್ನು ಪಡೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಕಚೇರಿ ಆದೇಶದಲ್ಲಿ ತಿಳಿಸಿದೆ.
ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಹಾಸ್ಟೆಲ್, ಕಾರ್ಖಾನೆಗಳು, ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳು, ಹೋಟೆಲ್ ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಕೋವಿಡ್ 3ನೇ ಅಲೆಯ ಅವಧಿಯ ಬಳಿಕ ಸೋಂಕಿನ ಪ್ರಮಾಣ ಏರಿಕೆ ಆಗಿದೆ ಎಂದಿರುವ ಆರೋಗ್ಯ ಇಲಾಖೆ ಪಾಸಿಟಿವಿಟಿ ಪ್ರಮಾಣ ಶೇಕಡಾ 2.41ರಷ್ಟಿದೆ ಎಂದಿದೆ.