ಬೆಂಗಳೂರು: ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಈ ಹಿನ್ನಲೆ ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್ ನಡೆಸಿದ್ದು, ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದಾರೆ. ನಗರದ ಬ್ರಿಗೇಡ್ ರೋಡ್, ಎಂಜಿ ರಸ್ತೆಯಲ್ಲಿ ಹೊಸ ಅಲೆಯ ವರ್ಷಾಚರಣೆಗೆ ಹೆಚ್ಚಿನ ಜನ ಸೇರಲಿದ್ದು, ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಆದರೆ ಈ ಬಾರಿ ಆ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಕೆಲವೊಂದಿಷ್ಟು ನಿಯಮಗಳನ್ನು ರೂಪಿಸಲಾಗಿದೆ.
ಈ ಸಂಬಂಧ ಪೊಲೀಸ್ ಅಧಿಕಾರಗಳ ಜೊತೆ ಸಭೆ ನಡೆಸಿದ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಘೋಷ್ಟಿ ನಡೆಸಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಮಾರ್ಗಸೂಚಿಯಲ್ಲಿ ಏನಿದೆ..?
* ಸ್ಟಾರ್ ಹೊಟೇಲ್, ಪಬ್, ಕ್ಲಬ್, ಜನಸಂದಣಿ ಪ್ರದೇಶಗಳಲ್ಲಿ ಬಂದೋಬಸ್ತ್ ಆಯಿಂಟ್ ನಿಯೋಜನೆ.
* ಮಹಿಳೆಯರ ಸುರಕ್ಷತೆಗಾಗಿ ಸೇಪ್ ಟೀಂ ಐಲ್ಯಾಂಡ್ಗಳ ಸ್ಥಾಪನೆ.
* ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ, ಫಿನಿಕ್ಸ್ ಮಾಲ್ ಮುಂಭಾಗ ಬಿಗಿ ಪೊಲೀಸ್ ಭದ್ರತೆ
* ಮಕ್ಕಳು ಕಾಣೆಯಾದರೆ ಮಾಹಿತಿ ನೀಡಲು ಕಿಯೋಸ್ಕ್ಗಳ ಸ್ಥಾಪನೆ.
* ವಾಚ್ ಟವರ್ಗಳನ್ನು ನಿರ್ಮಿಸಿ ಸೂಕ್ತ ಕಣ್ಗಾವಲು , ವೀಕ್ಷಣೆ. ಇಂದಿರಾನಗರ, ಕೋರಮಂಗಲದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ.
* ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾ ಕಣ್ಗಾವಲು
* ನಗರದಾದ್ಯಂತ 10 ಸಾವಿರಕ್ಕೂ ಅಧಿಕ ಪೊಲೀಸರು ಕರ್ತವ್ಯಕ್ಕೆ ನಿಯೋಜನೆ.
* ಡಿ.31 ರಂದು ರಾತ್ರಿ 11 ಗಂಟೆಯಿಂದ ಎಲ್ಲಾ ಫ್ಲೈಓವರ್ ಬಂದ್.
* ರಾತ್ರಿ 1 ಗಂಟೆವರೆಗೆ ಮಾತ್ರ ಹೊಸವರ್ಷ ಆಚರಣೆಗೆ ಅವಕಾಶ . ಒಂದು ಗಂಟೆಗೆ ಎಲ್ಲಾ ಹೊಟೇಲ್, ಬಾರ್ ಬಂದ್.
* ನಗರದ ಭದ್ರತೆಗಾಗಿ 2 ಹೆಚ್ಚುವರಿ ಪೊಲೀಸ್ ಆಯುಕ್ತರು, ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 160 ಇನ್ಸ್ಪೆಕ್ಟರ್, 600 ಸಬ್ ಇನ್ಸ್ಪೆಕ್ಟರ್, 600 ಎಎಸ್ಐ, 1800 ಹೆಡ್ ಕಾನ್ಸ್ಟೇಬಲ್, 5200 ಪೊಲೀಸ್ ಕಾನ್ಸ್ಟೇಬಲ್ಗಳ ನಿಯೋಜನೆ.
* ಒಟ್ಟೂ 48 ನಾಕಾಬಂದಿ ಮಾಡಲಾಗಿದ್ದು ವ್ಹೀಲಿಂಗ್, ರೇಸಿಂಗ್, ಡ್ರಿಂಕ್ ಆಂಡ್ ಡ್ರೈವ್ಗೆ ಕಡಿವಾಣ ಹಾಕಲು ಸಜ್ಜು.
* ಕಾರ್ಟೂನ್ ಮಾಸ್ಕ್ಗಳನ್ನು ಹೊಸ ವರ್ಷಾಚರಣೆ ವೇಳೆ ಸಂಪೂರ್ಣವಾಗಿ ನಿಷೇಧಿಸಲು ಚಿಂತನೆ ನಡೆಸಲಾಗಿದೆ.
* ರಾತ್ರಿ ವಿದ್ಯುತ್ ಸಂಪರ್ಕ ಸ್ಥಗಿತವಾಗದಂತೆ ಕ್ರಮ ವಹಿಸಬೇಕೆಂದು ಬೆಸ್ಕಾಂಗೆ ಸೂಚಿಸಲಾಗಿದೆ.
* ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಕಠಿಣ ಮಾರ್ಗಸೂಚಿ ರೂಪಿಸಲಾಗಿದ್ದು, ಕುಟುಂಬದೊಂದಿಗೆ ಬರುವವರಿಗೆ ಪ್ರತ್ಯೇಕ ಮಾರ್ಗ ನಿರ್ಮಾಣದ ಬಗ್ಗೆಯೂ ಚರ್ಚಿಸಲಾಗಿದೆ.
* ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ರಾತ್ರಿ 8 ಗಂಟೆಯಾದ ಬಳಿಕ ವಾಹನ ಸಂಚಾರ ಬಂದ್.
* ಸಂಭ್ರಮಾಚರಣೆಗೆ ಬರುವ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.