ನೈಋತ್ಯ ಮುಂಗಾರು ಮಾರುತಗಳು ಚುರುಕಾಗಿದ್ದು, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಈಗಾಗಲೇ ಬಳ್ಳಾರಿ, ರಾಯಚೂರು, ವಿಜಯಪುರ, ಧಾರವಾಡ ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುತ್ತಿದೆ. ರೈತರು ಖುಷಿ ಆಗಿದ್ದು, ಬಿತ್ತನೆ ಕಾರ್ಯಕ್ಕೆ ಸಜ್ಜಗುತ್ತಿದ್ದಾರೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮಾತ್ರವಲ್ಲದೆ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಪುದುಚ್ಚೆರಿಯಲ್ಲೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.