ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ (Unauthorized toll) ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ.
ಮಂಗಳೂರಿನಲ್ಲಿ 60 ಕಿ.ಮೀ. ಅಂತರದಲ್ಲಿ ಮೂರು ಟೋಲ್ ಕೇಂದ್ರಗಳಿವೆ. ಸುರತ್ಕಲ್ ಟೋಲ್ ಪ್ಲಾಜಾ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಯುತ್ತಿದೆ. ತಕ್ಷಣ ಟೋಲ್ ಪ್ಲಾಜಾ ತೆರವು ಮಾಡಬೇಕು ಎಂದು ಯು.ಟಿ ಖಾದರ್ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಿಸಿ ಪಾಟೀಲ್ ಅವರು, 60 ಕಿ.ಮೀ. ಅಂತರದೊಳಗೆ ಇರುವ ಟೋಲ್ ಸಂಗ್ರಹಣಾ ಕೇಂದ್ರಗಳನ್ನು ತೆರವುಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತೀರ್ಮಾನಿಸಿದೆ. ಈ ಕಾರಣದಿಂದ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಎನ್ಎಚ್ಎಐಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದನ್ನು ಪ್ರಾಧಿಕಾರ ಒಪ್ಪಿಕೊಂಡಿದೆ ಎಂದರು. ಇದನ್ನೂ ಓದಿ : ಉಡುಪಿ : ಉಡುಪಿ ಟೋಲ್ನಲ್ಲಿ ಆಂಬುಲೆನ್ಸ್ ಭಯಾನಕ ಅಪಘಾತ
ಸುರತ್ಕಲ್ ಬಳಿ ನವಯುಗ ಕನ್ಸ್ಟ್ರಕ್ಷನ್ಸ್ ಮತ್ತು ನವ ಮಂಗಳೂರು ಬಂದರು ರಸ್ತೆ ಕಂಪನಿಗಳು ರಸ್ತೆ ನಿರ್ಮಿಸಿವೆ. ಈ ಕಾರಣದಿಂದಾಗಿ 60 ಕಿ.ಮೀ. ಅಂತರದ ಮಧ್ಯದಲ್ಲಿ ಟೋಲ್ ಸಂಗ್ರಹಣಾ ಕೇಂದ್ರ ತೆರೆಯಲಾಗಿತ್ತು ಎಂದು ಹೇಳಿದರು.
ರಾಜ್ಯಾದ್ಯಂತ 19 ಅಕ್ರಮ (Unauthorized toll) ಟೋಲ್ಗಳಿವೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾರ್ಚ್ 2022 ರಲ್ಲಿ ಟೋಲ್ಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದ್ದರು. ಆರು ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯು ಟಿ ಖಾದರ್ ಮಾಹಿತಿ ನೀಡಿದರು. ಇದನ್ನೂ ಓದಿ : ಟೋಲ್ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ – ಚಪ್ಪಲಿಯಿಂದ ತಿರುಗಿ ಬಾರಿಸಿದ ಮಹಿಳೆ