ತಮಕೂರು: ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ(ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು.