ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ನೀಡಿದೆ.
ನಟ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ತುಂಬಿದ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅಗೌರವ ತೋರುವಂತ ಮಾತುಗಳನ್ನಾಡಿದ್ದಾರೆ ಎಂದು ಮಹಿಳಾ ಸಂಘಗಳು ದೂರು ದಾಖಲಿಸಿದ್ದವು. ಇದೀಗ ರಾಜ್ಯ ಮಹಿಳಾ ಆಯೋಗ ದರ್ಶನ್ ಗೆ ನೋಟಿಸ್ ನೀಡಿದ್ದು, ನೋಟಿಸ್ ತಲುಪಿದ 10 ದಿನದಲ್ಲಿ ಬಂದು, ಹೇಳಿಕೆ ಬಗ್ಗೆ ವಿವರಣೆ ನೀಡಲು ಸೂಚನೆ ನೀಡಲಾಗಿದೆ.
ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ಜಯಶ್ರೀ ಎನ್ನುವವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ವೇದಿಕೆಯ ಮೇಲೆಯೇ ಹೇಳಿದ್ದಾರೆ. ಈ ಹೇಳಿಕೆಗೆ ವಿರೋಧಿಸಿ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ಮಹಿಳಾ ಆಗೋಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖ ಮಾಡಿದ್ದರು.