ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ (Arul Saravanan) ದಿ ಲೆಜೆಂಡ್ (The Legend) ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿರು.
ನಾಯಕ ಸರವಣನ್ (Arul Saravanan) ಮಾತನಾಡಿ, ಸಿನಿಮಾ ಮಾಡಬೇಕು ಎಂಬ ಕನಸು ಚಿಕ್ಕ ವಯಸ್ಸಿನಿಂದ ಇತ್ತು. ಬ್ಯುಸಿನೆಸ್ ಮೇಲೆ ಹೆಚ್ಚು ಫೋಕಸ್ ಇತ್ತು. ಎಲ್ಲಾ ಸೆಟಲ್ಡ್ ಆದ ಮೇಲೆ ಸಿನಿಮಾ ಮಾಡಿದ್ದೇನೆ. ಕಳೆದ ಹದಿನೈದು ವರ್ಷದಿಂದ ನಿರ್ದೇಶಕ ಜೆ.ಡಿ.ಜೆರ್ರಿ ನನ್ನ ಜೊತೆ ಇದ್ದಾರೆ. ಪ್ರತಿಯೊಂದು ದೃಶ್ಯವೂ ಅದ್ಭುತವಾಗಿ ಮೂಡಿ ಬಂದಿದೆ. ಸಿನಿಮಾ ನೋಡಿ ಸಪೋರ್ಟ್ ಮಾಡಿ ಎಂದರು.
ರಾಜ್ಯದಲ್ಲಿ ಸಿನಿಮಾ ವಿತರಿಸ್ತಿರುವ ಹಾರಿಜನ್ ಸ್ಟುಡಿಯೋಸ್ ನ ಟೋನಿರಾಜ್, ಕನ್ನಡದಲ್ಲೂ ಸಿನಿಮಾ ಬುಕ್ಕಿಂಗ್ ಗೆ ಅವಕಾಶ ನೀಡುತ್ತೇವೆ. ಪ್ರತಿಯೊಬ್ಬರು ಸಿನಿಮಾ ನೋಡಿ ಬೆಂಬಲಿಸಿ ಎಂದರು.
ಟ್ರೇಲರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡ್ತಿರುವ ದಿ ಲೆಜೆಂಡ್ (The Legend) ಸಿನಿಮಾ ಜೆ.ಡಿ.ಜೆರ್ರಿ ಆಕ್ಷನ್ ಕಟ್ ಹೇಳಿದ್ದು, ಊರ್ವಶಿ ರೌಟೇಲಾ ಈ ಸಿನಿಮಾ ಮೂಲಕ ಮೊದಲ ಬಾರಿಗೆ ತಮಿಳು ಚಿತ್ರರಂಗ ಪ್ರವೇಶ ಮಾಡಿದ್ದು, ಸರವಣನ್ (Arul Saravanan) ಗೆ ಜೋಡಿಯಾಗಿ ನಟಿಸಿದ್ದಾರೆ.
ವಿಕ್ರಾಂತ್ ರೋಣ ಎಷ್ಟು ಥಿಯೇಟರ್ನಲ್ಲಿ ಬಿಡುಗಡೆಯಾಗಲಿದೆ ಗೊತ್ತೆ..? ಪಾಕಿಸ್ತಾನದಲ್ಲೂ ಕಿಚ್ಚನ ಹವಾ
ನಸ್ಸಾರ್, ಪ್ರಭು, ಸುಮನ್, ವಿವೇಕ್, ಇಮ್ಮನ್ ಅಣ್ಣಾಚಿ, ಯಶಿಕಾ ಆನಂದ್ ಸೇರಿದಂತೆ ಹಲವರು ತಾರಾಬಳಗ ಚಿತ್ರದಲ್ಲಿದ್ದಾರೆ. ಹ್ಯಾರೀಸ್ ಜಯರಾಜ್ ಮ್ಯೂಸಿಕ್ ಸಿನಿಮಾಕ್ಕಿದ್ದು, ವರ್ಲ್ಡ್ ವೈಡ್ 2000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ತೆರೆಗೆ ಬರ್ತಿದೆ.