ಉತ್ತರ ಪ್ರದೇಶದ ಉನ್ನಾವೋದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಇಂದು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.
ಯುವತಿಯು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸಕ್ಕೆ ಸೇರಿದ ಮೊದಲ ದಿನವೇ ಶವವಾಗಿ ಪತ್ತೆಯಾಗಿರುವುದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ.
ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಸಿಂಗ್ ಹೋಂನ ನಿರ್ವಾಹಕ ಸೇರಿ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಪ್ರಥಮ ಮಾಹಿತಿ ಆಧರಿಸಿ ಈ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವೊ ಹೆಚ್ಚುವರಿ ಎಸ್ಪಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ.