ಕೋವಿಡ್ ಸೋಂಕಿತರು ಕಡ್ಡಾಯವಾಗಿ 1 ವಾರ ಅಥವಾ ಏಳು ದಿನ ಮನೆಯಿಂದ ಹೊರಬರಕೂಡದು ಎಂದು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಕೋವಿಡ್ ಸೋಂಕಿತರಿಗೆ 1 ವಾರ ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದಕ್ಕೆ ಕೋವಿಡ್-19ಗೆ ಸಂಬಂಧಿಸಿದ ಸಚಿವರ ಸಂಪುಟ ಉಪ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಕೋವಿಡ್ ಸೋಂಕಿತರ ಮನೆಗಳಿಗೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಭೇಟಿ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಒಂದು ವೇಳೆ ಕೋವಿಡ್ ಸೋಂಕು ದೃಢಪಟ್ಟರೆ ಆಗ ಅವರಿಗೆ ಒಂದು ವಾರದ ಹೋಂ ಐಸೋಲೇಷನ್ಗಾಗಿ ರಜೆಯನ್ನೂ ನೀಡಲಾಗುತ್ತದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಾದರೆ ಆಗ ವಿಶೇಷ ರಜೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರ ಬಗ್ಗೆ ಆರೋಗ್ಯ ಇಲಾಖೆ ಟೆಲಿ ಐಸಿಯು ಮೂಲಕ ನಿಗಾ ವಹಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.