ಬೆಂಕಿಹಚ್ಚಿಕೊಂಡು 19 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
ಪಾವಗಡದಲ್ಲಿ ಮೊದಲನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ತೇಜಾ ಇಂದು ಬೆಳಗಿನಜಾವ 4.30ರ ಸುಮಾರಿನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈವರೆಗೂ ತೇಜಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಾವಗಡ ಪೊಲೀಸರು ತನಿಖೆ ನಡೆಸಿದ್ದಾರೆ.