ADVERTISEMENT
2ಎ ಮೀಸಲಾತಿಗಾಗಿ ಪಂಚಮಸಾಲಿಗಳು ನಡೆಸುತ್ತಿರುವ ಪ್ರತಿಭಟನೆ ಉದ್ವಿಗ್ನಗೊಂಡಿದೆ. ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿರುವ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.
ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿಗಳನ್ನು ಪೊಲೀಸರು ತಡೆಯಲು ಪ್ರಯತ್ನಿಸಿದರು. ಆದರೆ ಪಂಚಮಸಾಲಿಗಳು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪೊಲೀಸರು ಲಾಠಿ ಬೀಸಿದರು.
ಪೊಲೀಸರು ಲಾಠಿ ಬೀಸಿದ ಬೆನ್ನಲ್ಲೇ ಮತ್ತಷ್ಟು ಉದ್ರಿಕ್ತಗೊಂಡ ಪಂಚಮಸಾಲಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿಗಳನ್ನು ಎಸೆದರು.ದ್ವಿಗ್ನಗೊಂಡಿದೆ. ಪೊಲೀಸರ ಲಾಠಿ ಏಟಿಗೆ ಹಲವು ಪಂಚಮಸಾಲಿಗಳ ತಲೆಗೆ ಪೆಟ್ಟು ಬಿದ್ದಿದೆ.
ಪಂಚಮಸಾಲಿ ಸಮುದಾಯದ ಸ್ವಾಮೀಜಿ ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿಜೆಪಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬೇರೆಡೆಗೆ ಕರೆದುಕೊಂಡು ಹೋಗಿದ್ದಾರೆ.
ADVERTISEMENT