ಕೋವಿಡ್ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಪಾರ್ಟಿ ಮಾಡಿದ್ದ ಪ್ರಧಾನಿ ಮತ್ತು ಹಣಕಾಸು ಸಚಿವರಿಗೆ ದಂಡ ವಿಧಿಸಲು ಪೊಲೀಸರು ನಿರ್ಧರಿಸಿದ್ದಾರೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಹಣಕಾಸು ಸಚಿವ ರಿಷಿ ಸುನಕ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಪ್ರಧಾನಮಂತ್ರಿಗಳ ಅಧಿಕೃತ ನಿವಾಸ ಮಾಹಿತಿ ನೀಡಿದೆ.
ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ಕೂಡ ಹೌದು. ಬೋರಿಸ್ ಜಾನ್ಸನ್ ಬಳಿಕ ಇವರೇ ಬ್ರಿಟನ್ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ್ದು ಬ್ರಿಟನ್ನಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿ ಕಾರಣವಾಗಿದ್ದು, ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆಗೂ ಒತ್ತಡ ಹೆಚ್ಚಾಗುತ್ತಿದೆ.