ಕೇಂದ್ರ ಸರ್ಕಾರ ಸೇನಾ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಮುಂದಿನವಾರ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಜೆ.ಕೆ.ಮಹೇಶ್ವರಿ ಅವರಿದ್ದ ದ್ವಿಸದಸ್ಯ ಪೀಠವು ‘ಅಗ್ನಿಪಥ್’ ಯೋಜನೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಸೂಕ್ತ ಪೀಠವು ಮುಂದಿನ ವಾರ ವಿಚಾರಣೆ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಯೋಜನೆ ವಿರೋಧಿಸಿ ಅರ್ಜಿ ಸಲ್ಲಿಸಿರುವ ವಕೀಲರು ಭಾರತೀಯ ವಾಯುಪಡೆಯ ಆಕಾಂಕ್ಷಿಗಳು ತರಬೇತಿ ಪಡೆದು ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಈಗ ಅವರ ವೃತ್ತಿ ಅವಧಿಯನ್ನು 20 ವರ್ಷಗಳಿಂದ 4 ವರ್ಷಗಳಿಗೆ ಮೊಟಕುಗೊಳಿಸಲಾಗುವುದು ಇದು ಎಷ್ಟರ ಮಟ್ಟಿಗೆ ಸರಿ ಎಂದು ಕೇಂದ್ರ ಸರ್ಕಾರದ ಕ್ರಮವನ್ನ ಪ್ರಶ್ನಿಸಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಬೇಕಿದೆ. ಲಕ್ಷಾಂತರ ಆಕಾಂಕ್ಷಿಗಳು ವೃತ್ತಿಜೀವನ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ಅರ್ಜಿದಾರರು ನ್ಯಾಯಾಲಯದ ಗಮನವನ್ನ ಸೆಳೆದಿದ್ದರು.
ಅಗ್ನಿಪಥ್ ಯೋಜನೆಯನ್ನು ಕೇಮದ್ರ ಸರ್ಕಾರ ಜಾರಿ ಮಾಡಿದೆ. ಈಗಾಗಲೇ, ಈ ಯೋಜನೆಯಲ್ಲಿ ಅಗ್ನಿವೀರರ ನೇಮಕಾತಿಗಾಗಿ ದೇಶದಾದ್ಯಂತ ರ್ಯಾಲಿಗಳು ನಡೆಯುತ್ತಿವೆ.