ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ದೂರದಾರ ಸ್ನೇಹಮಯಿ ಕೃಷ್ಣ ಕ್ಷಮೆ ಕೇಳಿದ್ದಾರೆ.
ಇವತ್ತು ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ಕರ್ನಾಟಕ ಸರ್ಕಾರದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಮಾಧ್ಯಮಗಳಲ್ಲಿ ಸ್ನೇಹಮಯಿ ಕೃಷ್ಣ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಿರುದ್ಧ ಮಾಡಿದ್ದ ವೈಯಕ್ತಿಕ ಆರೋಪಗಳ ಬಗ್ಗೆ ಪ್ರಸ್ತಾಪ ಮಾಡಿದರು.
ಅಡ್ವೋಕೇಟ್ ಜನರಲ್ ವಿರುದ್ಧ ಅರ್ಜಿದಾರ ಸ್ನೇಹಮಯಿ ಕೃಷ್ಣ ಪಕ್ಷಪಾತದ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ ಎಂದು ಕಪಿಲ್ ಸಿಬಲ್ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ಅವರಿಗೆ ʻನಿಮ್ಮ ಕಕ್ಷಿದಾರರಿಗೆ ನಿಯಂತ್ರಣದಲ್ಲಿರಲು ಹೇಳಿ. ಈ ಪ್ರಕರಣ ನ್ಯಾಯಾಲಯದಲ್ಲಿದೆ. ಎಲ್ಲರೂ ತಮ್ಮ ತಮ್ಮ ನಿಯಂತ್ರಣದಲ್ಲಿರಬೇಕುʼ ಎಂದು ನ್ಯಾಯಮೂರ್ತಿಗಳು ಎಚ್ಚರಿಸಿದರು.
ಆಗ ತಮ್ಮ ಕಕ್ಷಿದಾರ ಸ್ನೇಹಮಯಿ ಕೃಷ್ಣ ಪರವಾಗಿ ಕ್ಷಮೆ ಕೇಳುತ್ತಿದ್ದೇನೆ ಎಂದು ವಕೀಲ ಕ್ಷಮೆಯಾಚಿಸಿದರು.
ADVERTISEMENT