ರಾಜ್ಯ ಸರ್ಕಾರವೇ ಪೆಟ್ರೋಲ್ ಬಂಕ್ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಉದ್ಯಮ ಶಕ್ತಿ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ಗಳನ್ನು ಸ್ಥಾಪಿಸಲಾಗುತ್ತದೆ.
ಅವುಗಳನ್ನು ಮಹಿಳಾ ಸಹಕಾರಿ ಸಂಘಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮವಹಿಸಲಾಗುತ್ತದೆ.
ಪೆಟ್ರೋಲಿಯಂ ಕಂಪನಿಗಳು ಇದರ ನಿರ್ಮಾಣಕ್ಕೆ ಬಂಡವಾಳ ಹೂಡಲಿದೆ. ರಾಜ್ಯ ಸರ್ಕಾರವು ಪೆಟ್ರೋಲ್ ಬಂಕ್ ಸ್ಥಾಪನೆಗೆ ಭೂಮಿ ಒದಗಿಸಲಿದೆ.
ADVERTISEMENT
ADVERTISEMENT