ಕೇಂದ್ರ ಸರ್ಕಾರ ವಾಹನ ಸವಾರರಿಗೆ ಸ್ವಲ್ಪ ಗುಡ್ ನ್ಯೂಸ್ ನೀಡಿದೆ. ಏಪ್ರಿಲ್ ಏಳರ ನಂತರ ಇದೆ ಮೊದಲ ಬಾರಿಗೆ ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ಕೇಂದ್ರ ಸರ್ಕಾರ ಇಳಿಸಿದೆ. ಬೆಳಗ್ಗೆ ಆರು ಗಂಟೆಯಿಂದ ಹೊಸ ದರ ಜಾರಿಗೆ ಬಂದಿದೆ.
ಪೆಟ್ರೋಲ್ ಬೆಲೆಯಲ್ಲಿ 40ಪೈಸೆ, ಡೀಸೆಲ್ ಬೆಲೆಯಲ್ಲಿ 40ಪೈಸೆ ಇಳಿಕೆ ಆಗಿದೆ.
ಸೋಮವಾರ ಬೆಂಗಳೂರಿನಲ್ಲಿ ಪೆಟ್ರೋಲ್ ದರ 101.94 ₹, ದೆಹಲಿಯಲ್ಲಿ 96.72₹, ಮುಂಬೈನಲ್ಲಿ 106.31₹, ಕೊಲ್ಕೋತಾದಲ್ಲಿ 106.03₹, ಚೆನ್ನೈನಲ್ಲಿ 102.63₹ ಇದೆ. ಮಂಗಳವಾರದಿಂದ ಈ ದರಗಳಲ್ಲಿ 40ಪೈಸೆ ಕಡಿಮೆ ಆಗಿದೆ.
ಇದು ಚುನಾವಣಾ ವರ್ಷವಾಗಿರುವ ಕಾರಣ ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಕಡಿಮೆ ಆಗಬಹುದು ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಸ್ಥಿರವಾಗಿರುವ ಹಿನ್ನೆಲೆಯಲ್ಲಿ ತೈಲ ಸಂಸ್ಥೆಗಳು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಲು ತೀರ್ಮಾನಿಸಿವೆ.
ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ಕಚ್ಚಾ ತೈಲದ ಬೆಲೆ 95ಡಾಲರ್ ಗಿಂತ ಕಡಿಮೆ ಇದೆ.