ಈ ವರ್ಷದ ಅಂತ್ಯದಲ್ಲಿ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗುವ ನಿರೀಕ್ಷೆ ಇದೆ.
ಆಗಸ್ಟ್ ವೇಳೆಗೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್ಗೆ 4ರಿಂದ 5 ರೂಪಾಯಿಯಷ್ಟು ಇಳಿಕೆ ಮಾಡುವ ನಿರೀಕ್ಷೆ ಇದೆ.
ತೈಲ ಬೆಲೆ ಇಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೈಲ ಕಂಪನಿಗಳಿಗೆ ನಿರ್ದೇಶನ ನೀಡುವ ಸಾಧ್ಯತೆ ದಟ್ಟವಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಸೋಲಲು ಬೆಲೆ ಏರಿಕೆಯೇ ಪ್ರಮುಖ ಕಾರಣವಾಗಿತ್ತು.
ನವೆಂಬರ್-ಡಿಸೆಂಬರ್ ವೇಳೆ ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಅತ್ಯಂತ ಮಹತ್ವದ್ದು.
ಈ ಹಿನ್ನೆಲೆಯಲ್ಲಿ ಬೆಲೆ ಇಳಿಕೆ ಮೂಲಕ ಬಿಜೆಪಿ ಚುನಾವಣಾ ಸಂದೇಶ ರವಾನಿಸುವ ನಿರೀಕ್ಷೆ ಇದೆ.
ADVERTISEMENT
ADVERTISEMENT