ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಮುಖಿ ಆಗುತ್ತಿದ್ದೂ, ಇಳಿಕೆಯಾಗುವ ಯಾವುದೇ ಸೂಚನೆ ಕಾಣುತ್ತಿಲ್ಲ. ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಗುರುವಾರವೂ ತೈಲ ಕಂಪನಿಗಳು ಮತ್ತೆ ದರ ಏರಿಕೆ ಮಾಡಿವೆ.
ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 80 ಪೈಸೆ ಏರಿಕೆ ಮಾಡಲಾಗಿದೆ.
ಪ್ರಸ್ತುತ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ Rs 107.28 ಆಗಿದ್ದರೆ, ಡೀಸೆಲ್ ಬೆಲೆ Rs 91.25 ರೂಪಾಯಿ ಆಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ ಕಂಡಿದ್ದರೂ ದೇಶಿಯವಾಗಿ ಮಾತ್ರ ತೈಲ ಬೆಲೆ ಏರಿಕೆ ಮಾಡಲಾಗುತ್ತಿದೆ.