ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ 12 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆಯಷ್ಟು ಹೆಚ್ಚಳ ಆಗಿದೆ.
ಇತ್ತ ಅಡುಗೆ ಅನಿಲದ ಬೆಲೆಯೂ 50 ರೂಪಾಯಿ ಹೆಚ್ಚಳ ಆಗಿದೆ.
ನವೆಂಬರ್ 2ರಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಇಳಿಸುವ ಮೂಲಕ ಬೆಲೆ ಇಳಿಕೆ ಮಾಡಿತ್ತು. 137 ದಿನಗಳ ಬಳಿಕ ಈಗ ಮತ್ತೆ ಪೆಟ್ರೋಲ್, ಡೀಸೆಲ್ ಬೆ;ಲೆ ಹೆಚ್ಚಳ ಆಗಿದೆ.
ಮೊನ್ನೆಯಷ್ಟೇ ಕೇಂದ್ರ ಸರ್ಕಾರ ಸಗಟು ಡೀಸೆಲ್ ಬೆಲೆಯನ್ನು ಲೀಟರ್ ಗೆ 25 ರೂಪಾಯಿಯಷ್ಟು ಹೆಚ್ಚಳ ಮಾಡಿತ್ತು. ಇದು ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳ ಮಾಲೀಕರು ಮತ್ತು ಸರಕು ಸಾಗಾಣಿಕೆ ವಾಹನಗಳ ಮಾಲೀಕರಿಗೆ ಆಘಾತ ನೀಡಿತ್ತು.