ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವ ಬೆನ್ನಲ್ಲೇ ಆ ಸಂಘಟನೆಯ ಟ್ವಿಟರ್, ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಖಾತೆಗಳನ್ನು ಅಳಿಸಲಾಗಿದೆ.
ಭಾರತದಲ್ಲಿ ಮೆಟಾ ಒಡೆತನದ ಫೇಸ್ಬುಕ್ ಮತ್ತು ಟ್ವಿಟರ್ ಈ ಕ್ರಮ ಕೈಗೊಂಡಿವೆ. ಅಲ್ಲದೇ ಪಿಎಫ್ಐ ಸಂಘಟನೆಯ ಮುಖಂಡರ ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳ ಖಾತೆಯನ್ನೂ ಅಳಿಸಿ ಹಾಕಲಾಗಿದೆ.
ಪಿಎಫ್ಐಗೆ ಟ್ವಿಟರ್ನಲ್ಲಿ 81,000 ಹಿಂಬಾಲಕರು ಇದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ಬುಧವಾರ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ : PFI ಮೇಲೆ ಮತ್ತೊಮ್ಮೆ ಪೊಲೀಸ್ ದಾಳಿ : 70 ಜನ ವಶಕ್ಕೆ
ಜಾಗತಿಕ ಮಟ್ಟದ ಭಯೋತ್ಪಾದನಾ ಸಂಘಟನೆ ಐಎಸ್ ಮತ್ತು ಇತರ ಉಗ್ರಗಾಮಿ ಸಂಘಟನೆಗಳ ಜತೆಗೆ ನಂಟು ಹೊಂದಿದೆ ಹಾಗೂ ದೇಶದೊಳಗೆ ಕೋಮುದ್ವೇಷ ಹರಡಲು ಸಂಘಟನೆಯು ಯತ್ನಿಸಿದೆ ಎಂದು ಆರೋಪಿಸಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ವಿವಿಧ ರಾಜ್ಯಗಳ ಪೊಲೀಸರು ಇತ್ತೀಚಿನ ಕೆಲ ದಿನಗಳಲ್ಲಿ ಪಿಎಫ್ಐಗೆ ಸಂಬಂಧಿಸಿದ ಸ್ಥಳಗಳಲ್ಲಿ ಎರಡು ಬಾರಿ ಶೋಧ ನಡೆಸಿ 106 ಮುಖಂಡರನ್ನು ಬಂಧಿಸಿದ್ದರು.
ಇದನ್ನೂ ಓದಿ : PFI ಬ್ಯಾನ್ ಸ್ವಾಗತಾರ್ಹ : ಪಸ್ಮಂಡಾ ಮುಸ್ಲಿಂ ಮಂಡಳಿ