ಪ್ರಧಾನಿ ನರೇಂದ್ರ ಮೋದಿ 5 ಲಕ್ಷ ಮನೆಗಳ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಇವತ್ತು ಮಧ್ಯಾಹ್ನ 12.30ಕ್ಕೆ ಗೃಹ ಪ್ರವೇಶ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಪ್ರಧಾನಮಂತ್ರಿ ವಸತಿ ಯೋಜನೆಯಡಿ 5.21 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಆ ಮನೆಗಳಿಗೆ ಇವತ್ತು ಏಕಕಾಲಕ್ಕೆ ಗೃಹ ಪ್ರವೇಶ ನಡೆಯಲಿದ್ದು, ವೀಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.
ಇದು ಮಧ್ಯಪ್ರದೇಶದ ಸಹೋದರ ಮತ್ತು ಸಹೋದರಿಯರ ಬಾಳಲ್ಲಿ ಹೊಸ ಬೆಳಕು ಮೂಡಿಸಲಿದೆ ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.