ADVERTISEMENT
ಬಿಜೆಪಿ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿ ಭೋಜನಕ್ಕೆ ಆಹ್ವಾನಿಸಿದ್ದಾರೆ.
ಜುಲೈ 18ರಂದು ಸೋಮವಾರ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ 6.30ಕ್ಕೆ ಸಂಸತ್ ಭವನದಲ್ಲಿ ಎಲ್ಲ ಬಿಜೆಪಿ ಶಾಸಕರಿಗೂ ಹಾಜರಿರುವಂತೆ ಸೂಚಿಸಲಾಗಿದೆ. ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ ಬಗ್ಗೆ ಸಂಸದರಿಗೆ ವಿವರಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಭಾಗಿ ಆಗಲಿದ್ದಾರೆ.
ಮರು ದಿನ ಅಂದರೆ ಭಾನುವಾರ ಎನ್ಡಿಎ ಮೈತ್ರಿಕೂಟದ ಉಳಿದ ಪಕ್ಷದ ಸಂಸದರೊಂದಿಗೂ ಇದೇ ರೀತಿಯ ಸಭೆ ನಡೆಯಲಿದೆ.
ಎನ್ಡಿಎ ಮತ್ತು ಇತರೆ ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ 6 ಲಕ್ಷದ 70 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ದೇಶದ ಮೊದಲ ಆದಿವಾಸಿ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ ಆಗುವುದು ಖಚಿತವಾಗಿದೆ.
ADVERTISEMENT