ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದ್ದು, ಉಚಿತ ಪಡಿತರ ಯೋಜನೆಯನ್ನು ಕೇಂದ್ರ ಸರ್ಕಾರ ಮೂರು ತಿಂಗಳವರೆಗೆ ವಿಸ್ತರಿಸುವ ಮೂಲಕ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY)ಯನ್ನು ಇನ್ನೂ 3 ತಿಂಗಳವರೆಗೆ ವಿಸ್ತರಿಸಲಾಗಿದೆ. ಈಗ ಈ ಯೋಜನೆಯಡಿ ಪಡಿತರ ಚೀಟಿದಾರರು ಡಿಸೆಂಬರ್ವರೆಗೆ ಸರ್ಕಾರದಿಂದ ಉಚಿತ ಪಡಿತರ ಪ್ರಯೋಜನ ಪಡೆಯಲಿದ್ದಾರೆ.
ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಯೋಜನೆಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಘೋಷಿಸಿದ್ದಾರೆ. ಇದನ್ನೂ ಓದಿ : ಪಡಿತರದಾರರಿಗೆ ಗುಡ್ ನ್ಯೂಸ್ – 2022ರ ಮಾರ್ಚ್ ವರೆಗೆ ಉಚಿತ ರೇಷನ್
ಕೇಂದ್ರ ಸರ್ಕಾರ ಈ ಯೋಜನೆ ಬಗ್ಗೆ ಮಾಹಿತಿ ನೀಡಿದ ಬಳಿಕ ಇದು ನೇರವಾಗಿ 80 ಕೋಟಿ ಜನರಿಗೆ ಪ್ರಯೋಜನ ನೀಡುತ್ತದೆ. ಸರ್ಕಾರದಿಂದ ಈ ಯೋಜನೆಯ ವಿಸ್ತರಿಸುವ ಸುಳಿವು ಈಗಾಗಲೇ ನೀಡಲಾಗಿತ್ತು.
ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರವು ಬರೋಬ್ಬರಿ 3.40 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಕೇಂದ್ರ ಸರ್ಕಾರವು ಏಪ್ರಿಲ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಈ ಯೋಜನೆ ಪ್ರಾರಂಭಿಸಿತು. ನಂತರ ಮಾರ್ಚ್ 2022ರಲ್ಲಿ 6 ತಿಂಗಳವರೆಗೆ ಅಂದರೆ ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಯಿತು. ಇದೀಗ ಸರ್ಕಾರ ಮತ್ತೊಮ್ಮೆ 2022ರ ಡಿಸೆಂಬರ್ವರೆಗೆ 3 ತಿಂಗಳ ಕಾಲ ವಿಸ್ತರಿಸಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಪ್ರತಿ ಮನೆಗೂ ವಿದ್ಯುತ್ ಸಂಪರ್ಕ: ಇಂಧನ ಸಚಿವ ಸುನೀಲ್ ಕುಮಾರ್