ಹೊಸದಿಲ್ಲಿ: ಮಧ್ಯಪ್ರದೇಶದ ನೂತನ ಸಿಎಂ ಆಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಬಿಜೆಪಿ ಘೋಷಣೆ ಮಾಡಿದ್ದು, ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರ ಅಧಿಕಾರದ ಯುಗಾಂತ್ಯವಾಗಿದೆ.
ಈ ಮೂಲಕ ಹೊಸ ಮುಖಕ್ಕೆ ಮಣೆ ಹಾಕಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಡೆ ಇಟ್ಟಿದ್ದು, ಭೋಪಾಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಉಜ್ಜೈನ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಯಾದವ್ ಅವರು ಚವ್ಹಾಣ್ ಅವರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮುಗಿದು ಒಂದು ವಾರದ ಬಳಿಕ ಬಿಜೆಪಿ ಮುಖ್ಯಮಂತ್ರಿ ಹೆಸರನ್ನು ಘೋಷಣೆ ಮಾಡಿದ್ದು, ಕೇವಲ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮೋಹನ್ ಯಾದವ್ ಇದೀಗ ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿದ್ದಾರೆ.