ಚುನಾವಣಾ ಸಲಹೆಗಾರರಾಗಿ ಉಳಿದುಕೊಳ್ಳುವ ಬದಲು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿ ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ಗೆ ಕಾಂಗ್ರೆಸ್ ಸಲಹೆ ನೀಡಿದೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲು ಪ್ರಶಾಂತ್ ಕಿಶೋರ್ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ದೌರ್ಬಲ್ಯಗಳು ಮತ್ತು ಕಾಂಗ್ರೆಸ್ ಪಕ್ಷ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ ವಿವರವಾದ ವರದಿಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಅಲ್ಲದೇ 2024ರ ಲೋಕಸಭಾ ಚುನಾವಣೆಯ ವೇಳೆ 370 ಸೀಟುಗಳ ಗಮನ ಕೇಂದ್ರೀಕರಿಸುವ ಬಗ್ಗೆ ಕಾಂಗ್ರೆಸ್ಗೆ ಸಲಹೆ ನೀಡಿದ್ದಾರೆ.
ಉತ್ತರಪ್ರದೇಶ, ಬಿಹಾರ ಮತ್ತು ಒಡಿಶಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಬೇಕು ಮತ್ತು ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬೇಕೆಂಬ ಸಲಹೆ ನೀಡಿದ್ದಾರೆ. ಈ ಸಲಹೆಗೆ ರಾಹುಲ್ ಗಾಂಧಿಯೂ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವರ್ಷದ ಡಿಸೆಂಬರ್ನಲ್ಲಿ ಗುಜರಾತ್ ಮತ್ತು ಹಿಮಾಚಲಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಆದರೆ 2024ರ ಲೋಕಸಭಾ ಚುನಾವಣೆ್ ಸಂಬಂಧ ಪ್ರಶಾಂತ್ ಕಿಶೋರ್ ಮತ್ತು ಕಾಂಗ್ರೆಸ್ ಸಹಮತಕ್ಕೆ ಬಂದ ಬಳಿಕಷ್ಟೇ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ಪಾತ್ರ ನಿರ್ಧಾರ ಆಗಲಿದೆ ಎನ್ನಲಾಗಿದೆ.