ಸಿಎಂ ಸಿದ್ದರಾಮಯ್ಯ ಅವರಿಗೆ ಸೋಮಾರಿ ಸಿದ್ದ ಪದ ಬಳಸಿಲ್ಲ. ಸಿದ್ದರಾಮಯ್ಯರನ್ನು ದೃಷ್ಟಿಯಲ್ಲಿ ಇಟ್ಕೊಂಡು ಹೇಳಿಲ್ಲ ಅಂತ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ಫೇಸ್ ಬುಕ್ ಲೈವ್ನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ನೀವು ಕಲ್ಲು ಬಿಸಾಡಿದರೆ, ನಾನು ಹಣ್ಣು ಕೊಡಲ್ಲ. ಕಲ್ಲು ಬೀಸಿದರೆ ಹಣ್ಣು ಕೊಡಲು ನಾನು ಮರವಲ್ಲ. ನಾನು ಸಹ ತೀವ್ರವಾಗಿಯೇ ಕಲ್ಲು ಬಿಸಾಡುತ್ತೇನೆ ಅಂತ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಫೇಸ್ ಬುಕ್ ಪೇಜ್ನಲ್ಲಿ ಅಣ್ಣ ನಾಡಕಳ್ಳ, ತಮ್ಮ ಮರಗಳ್ಳ ಅಂತ ಬರೆದುಕೊಂಡಿದ್ದಿರಿ. ಈ ರೀತಿ ಬರೆದು ನನ್ನ ಬಳಿ ನೀವು ಯಾವ ರೀತಿ ಗೌರವ ಕೊಡಿ ಅಂತಾ ಕೇಳುತ್ತೀರಿ ಅಂತ ಪ್ರಶ್ನಿಸಿರೋ ಪ್ರತಾಪ್ ಸಿಂಹ, ಎಫ್ಐಆರ್ನಲ್ಲಿ ನನ್ನ ತಮ್ಮನ ಹೆಸರಿಲ್ಲ. ನನ್ನ ಅಭಿವೃದ್ಧಿ ಕೆಲಸಗಳು ಬಹಳಷ್ಟು ಜನರ ಕಣ್ಣು ಕುಕ್ಕುತ್ತಿದೆ ಹೀಗಾಗಿ ಈ ರೀತಿ ತಿರುಚುತ್ತಿದ್ದಾರೆ ಎಂದಿದ್ದಾರೆ.
ಮೈಸೂರಿನಲ್ಲಿ ನಿಮ್ಮ ಬಾಲಬುಡುಕರು ಬಹಳಷ್ಟು ಜನ ಹುಟ್ಟಿಕೊಂಡಿದ್ದಾರೆ. ಅದರಲ್ಲಿ ಕೆಲವರು ಲೋಕಸಭಾ ಚುನಾವಣಾ ಆಕಾಂಕ್ಷಿಗಳಿದ್ದಾರೆ. ಮೊದಲು ನೀವು ಅಭ್ಯರ್ಥಿ ಹೆಸರು ಘೋಷಣೆ ಮಾಡಿ. ಆವಾಗ ಅವರೇ ಕಿತ್ತಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
‘ನಾನು ಸೋಮಾರಿ ಸಿದ್ದ ಅಲ್ಲ’ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.