ಅನುಕಂಪದ ಆಧಾರದಲ್ಲಿ ಬಿಜೆಪಿ ಸರ್ಕಾರ ಕೊಟ್ಟಿದ್ದ ತಾತ್ಕಾಲಿಕ ಉದ್ಯೋಗವನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ಕಳೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ವಿಭಾಗದಲ್ಲಿದ್ದ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ಸೇವೆಯಿಂದ ಮುಕ್ತಗೊಳಿಸಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಮೇ 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟವನ್ನು ವಿಸರ್ಜನೆಗೊಳಿಸಲಾಗಿತ್ತು.
ಬೊಮ್ಮಾಯಿ ಸಂಪುಟ ವಿಸರ್ಜನೆಗೊಂಡ ಹಿನ್ನೆಲೆಯಲ್ಲಿ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಅಥವಾ ಒಪ್ಪಂದದ ಅಡಿಯಲ್ಲಿ ನಿಯುಕ್ತಿಗೊಂಡಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಮೇ 16ರಂದೇ ರಾಜ್ಯ ಸರ್ಕಾರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಆಧೀನ ಕಾರ್ಯದರ್ಶಿಗಳು ಆದೇಶ ನೀಡಿದ್ದರು.
ಮೇ 16ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿದ್ದ ಆದೇಶ
ಮೇ 20ರಂದು ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು.
ನಿಯಮಗಳ ಪ್ರಕಾರ ಹೊಸ ಸರ್ಕಾರ ಬಂದಾಗ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ವಿವೇಚನಾಧಿಕಾರ ಮೂಲಕ ನೇಮಕವಾದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಲು ಅವಕಾಶವಿದೆ.
ಮುಖ್ಯಮಂತ್ರಿ ಪದವಿ ಇರುವವರೆಗೆ ಪ್ರವೀಣ್ ನೆಟ್ಟಾರು ಪತ್ನಿ ನೇಮಕ:
ಕಳೆದ ವರ್ಷದ ಸೆಪ್ಟೆಂಬರ್ 9ರಂದು ಪ್ರವೀಣ್ ನೆಟ್ಟಾರು ಪತ್ನಿ ಅವರನ್ನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಆದೇಶಿಸಿತ್ತು. ಇವರಿಗೆ ತಿಂಗಳಿಗೆ 30,350 ರೂಪಾಯಿ ವೇತನವನ್ನು ನಿಗದಿಪಡಿಸಲಾಗಿತ್ತು.
ಸೆಪ್ಟೆಂಬರ್ 29,2022ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೊರಡಿಸಿದ್ದ ನೇಮಕಾತಿ ಆದೇಶ
ಗುತ್ತಿಗೆ ಆಧಾರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ