ಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಹುಜನ ಸಮಾಜವಾದಿ ಪಕ್ಷ ಬಹಿರಂಗ ಬೆಂಬಲ ಘೋಷಿಸಿದೆ.
ಆದಿವಾಸಿ ಸಮಾಜ ಬಿಎಸ್ ಪಿ ಪಕ್ಷದ ಅವಿಭಾಜ್ಯ ಅಂಗ ಎಂಬುದನ್ನು ಗಮನದಲ್ಲಿಟ್ಟುಕೊಂಡು ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಪಕ್ಷ ನಿರ್ಧರಿಸಿದೆ ಎಂದು ಬಿಎಸ್ ಪಿ ಪಕ್ಷದ ಅಧಿನಾಯಕಿ ಮಾಯಾವತಿ ತಿಳಿಸಿದ್ದಾರೆ.
ಈ ನಿರ್ಧಾರ ಬಿಜೆಪಿ ಅಥವಾ ಎನ್ ಡಿಎ ಪರವಾಗಿಯೋ ಅಥವಾ ಯುಪಿಎ ವಿರುದ್ಧವಾಗಿಯೋ ತೆಗೆದುಕೊಂಡಿರುವುದಲ್ಲ. ಬದಲಾಗಿ, ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿಸುವುದಕ್ಕೆ ನಮ್ಮ ಪಕ್ಷ ಹಾಗೂ ಅದರ ಚಳುವಳಿಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಂಡಿರುವುದಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ.
ಇದೇವೇಳೆ, ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ನಿರ್ಧರಿಸುವಾಗ ವಿಪಕ್ಷಗಳು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮಾಯಾವತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜುಲೈ18 ರಂದು ನಡೆಯಲಿರುವ ಚುನಾವಣೆಗೆ ಜೂ.24 ರಂದು ಮುರ್ಮು ನಾಮಪತ್ರ ಸಲ್ಲಿಸಿಕೆ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದರೆ ದ್ರೌಪದಿ ಮುರ್ಮು ಭಾರತದ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ 2ನೇ ಮಹಿಳೆ ಹಾಗೂ ಮೊದಲ ಬುಡಕಟ್ಟು ನಾಯಕಿಯಾಗಿರಲಿದ್ದಾರೆ.
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರಿಗೆ ಈಗಾಗಲೇ ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಹಾಗೂ ಒಡಿಸ್ಸಾದ ಬಿಜೆಪಿ ಪಕ್ಷ ಬಹಿರಂಗ ಬೆಂಬಲ ಘೋಷಿಸಿವೆ.
ದ್ರೌಪದಿ ಮುರ್ಮು ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ. ಈಗಾಗಲೇ ಪಶ್ಚಿಮ ಬಂಗಾಳದ ಟಿಎಂಸಿ ನಾಯಕರಾಗಿದ್ದ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.