ನಾಮಫಲಕ ಧ್ವಂಸ ಪ್ರಕರಣದಲ್ಲಿ ಬಂಧಿತ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್ ಕರೆ ಮಾಡೋದಾಗಿ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ನಡೆದ ಖಂಡನಾ ಸಭೆಯಲ್ಲಿ ಮಾತನಾಡಿದ ಪ್ರವೀಣ್ ಶೆಟ್ಟಿ, ಬಂಧಿತರಾಗಿರುವ ಹೋರಾಟಗಾರರನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು, ಇಲ್ಲವಾದಲ್ಲಿ ಬೆಂಗಳೂರು ಬಂದ್ ಮಾಡಿಯೇ ತೀರುತ್ತೇವೆ ಅಂತ ಎಚ್ಚರಿಕೆ ನೀಡಿದ್ರು.
ಸಭೆಯಲ್ಲಿ ಸಾಹಿತಿಗಳು ಸೇರಿದಂತೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ರು. ಸಭೆಯಲ್ಲಿ ಪ್ರಮುಖವಾಗಿ ಈ ಎರಡು ನಿರ್ಣಯಗಳನ್ನು ಕೈಗೊಳ್ಳಲಾಯ್ತು.
ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ ಕೂಡಲೇ ಎಚ್ಚೆತ್ತುಕೊಂಡಿದ್ದ ಕರವೇ, ಅಂಗಡಿ ಮುಗ್ಗಟ್ಟುಗಳು ಹಾಗೂ ಮಾಲ್ ಗಳ ನಾಮಫಲಕದಲ್ಲಿ ಕನ್ನಡ ಬಳಸದಿರೋದನ್ನ ಖಂಡಿಸಿದ್ರು. ಅಲ್ಲದೆ ಈ ಸಂದರ್ಭದಲ್ಲಿ ಹೋರಾಟಗಾರರು ಕಲ್ಲು ತೂರಾಟ ನಡೆಸಿ ಬೋರ್ಡ್ ಗಳನ್ನು ಕಿತ್ತು ಹಾಕಿದ್ದರು. ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದ ಆರೋಪದಲ್ಲಿ ನಾರಾಯಣ ಗೌಡ ಸೇರಿದಂತೆ ಕನ್ನಡ ಹೋರಾಟಗಾರನ್ನು ಬಂಧಿಸಲಾಗಿತ್ತು.