ಉತ್ತರ ಪ್ರದೇಶದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಯುವ ಮೋರ್ಚಾದ ಮಾಜಿ ಜಿಲ್ಲಾ ಅಧ್ಯಕ್ಷನಾಗಿದ್ದ ಹರ್ಷಿತ್ ಶ್ರೀವಾಸ್ತವ ಬಂಧಿತ ಆರೋಪಿ. ಕಾನ್ಪುರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕಾನ್ಪುರದಲ್ಲಿ ಕೋಮುಗಲಭೆಯೂ ನಡೆಯಿತು.
ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ 15 ಅರಬ್ ರಾಷ್ಟ್ರಗಳು ಅಲ್ಲಿನ ಭಾರತದ ರಾಜತಾಂತ್ರಿಕ ಅಧಿಕಾರಿಗಳ ಮುಂದೆ ತಮ್ಮ ಪ್ರತಿಭಟನೆ ದಾಖಲಿಸಿದ್ದವು.