ಪಿಎಸ್ಐ ಅಕ್ರಮ ನೇಮಕಾತಿಗೆ (PSI Illegal Recruitment) ಸಂಬಂಧಿಸಿದಂತೆ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತರನ್ನು (25) ಸಿಐಡಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದರು. ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ : PSI ಅಕ್ರಮ ನೇಮಕಾತಿ ಪ್ರಕರಣ : ಎಡಿಜಿಪಿ ಅಮೃತ್ ಪೌಲ್ ಬಂಧನ
ಮಹಾರಾಷ್ಟ್ರ ಗಡಿಯ ವಿಜಯಪುರ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಬಸವರಾಜ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದಿದೆ.
ಪಿಎಸ್ಐ ಅಕ್ರಮ (PSI Illegal Recruitment) ನಡೆದ ಆರೋಪ ಕೇಳಿ ಬಂದಾಗ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಕ್ರಮ ಖಂಡಿಸಿ ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದರು.
ಇದನ್ನೂ ಓದಿ : ನ್ಯಾಯ ಸಿಗದಿದ್ದರೆ ಭಯೋತ್ಪಾದಕರಾಗುತ್ತೇವೆ : ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ PSI ಅಭ್ಯರ್ಥಿಗಳು