ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ (PSI Illegal Recruitment Case) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದ (PSI Illegal Recruitment Case) ಕಾರಣಕ್ಕೆ ಸರ್ಕಾರವು ನೇಮಕಾತಿ ಪ್ರಕ್ರಿಯೆ ರದ್ದು ಪಡಿಸಿತ್ತು. 545 ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಇಲಾಖೆ ಬದ್ಧವಾಗಿದೆ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ : PSI ನೇಮಕಾತಿ ಹಗರಣ: BJP ಶಾಸಕರ ಆಡಿಯೋ ಬಹಿರಂಗ
ಕೆಲವು ಅಭ್ಯರ್ಥಿಗಳು ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ಭಾಗಿಯಾದ ಎಲ್ಲರ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ. ಆರೋಪಿ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸ್ಮರ್ಧಾತ್ಮಕ ಪರೀಕ್ಷೆಗೆ ಅವಕಾಶ ಸಿಗದಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಪ್ರಕರಣ ಸಂಬಂಧ ತನಿಖೆ ಮಾಡುತ್ತಿರುವ ಸಿಐಡಿ ಅಕ್ಟೋಬರ್ನಲ್ಲಿ ದೋಷಾರೋಪ ಪಟ್ಟಿಸಲ್ಲಿಸಲಿದೆ ಎಂದು ಹೇಳಿದ ಸೂದ್, ಸಿಐಡಿ 90 ದಿನಗಳೊಳಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಿದೆ. ಸಿಐಡಿ ತನಿಖೆ ಮುಗಿಯುವವರೆಗೂ ಮರು ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ಪಿಎಸ್ಐ ಅಕ್ರಮ ನೇಮಕಾತಿ : 12 ಪೊಲೀಸ್ ಸಿಬ್ಬಂದಿ ಅಮಾನತು