545 ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆಗೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ನಾಲ್ವರು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಆದೇಶಿಸಿದೆ.
ಈ ಕುರಿತಂತೆ ಬೆಂಗಳೂರಿನ ಎಲ್.ಎನ್.ಪವಿತ್ರ ಸೇರಿದಂತೆ ಒಟ್ಟು 28 ಜನರು ಸಲ್ಲಿಸಿರುವ ಅರ್ಜಿಯನ್ನು ಕೆಎಟಿ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.
ಅರ್ಜಿದಾರರ ಪರ ಹೈಕೋರ್ಟ್‌ನ ಹಿರಿಯ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿ, ಸರ್ಕಾರದ ಆದೇಶ ರದ್ದುಪಡಿಸಿ, ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಅನುಸಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಹಾಗೂ ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿಕೊಂಡರು.
https://youtu.be/DWDJL7jLdi8