ಬುಧವಾರ ಅಂದರೆ ಫೆಬ್ರವರಿ 16ರಿಂದ ರಾಜ್ಯದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ಮತ್ತು ಎಲ್ಲ ಪದವಿ ತರಗತಿಗಳು ಆರಂಭ ಆಗಲಿವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ನಡೆಯಿತು.
ಹೈಕೋರ್ಟ್ ಆದೇಶವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಎಚ್ಚರ ವಹಿಸ್ತೀವಿ, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ತೀವಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆಯ ಬಳಿಕ ಹೇಳಿದರು.