ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಸಂಚಾರಿ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಪಿಯುಸಿ ವಿದ್ಯಾರ್ಥಿಗಳು ವಾಹನ ಚಾಲನಾ ಪರವಾನಗಿ(ಡಿಎಲ್) ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಆದ್ದರಿಂದ, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ಅಥವಾ ಸ್ಕೂಟಿ ತರುವಂತಿಲ್ಲ ಎಂದು ಎಂದು ಹೇಳಿದ್ದಾರೆ.
ಬೈಕ್ ವೀಲ್ಹಿಂಗ್ ವಿರುದ್ಧ ಇಲಾಖೆಯಿಂದ ವಿಶೇಕ್ಷ ಅಭಿಯಾನ ನಡೆಸುತ್ತಿದ್ದೇವೆ. ಕಳೆದ ಒಂದು ವಾರದಲ್ಲಿಯೇ 14 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದ ದೂರುಗಳ ಆಧಾರದ ಮೇಲೆಯೇ 12 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಈ ಪ್ರಕರಣಗಳಲ್ಲಿ 5 ರಿಂದ 10 ಲಕ್ಷದ ವರೆಗೆ ಬಾಂಡ್ ಬರೆಯಿಸಿಕೊಳ್ಳುತ್ತೇವೆ. ವೀಲ್ಹಿಂಗ್ ಮಾಡುವ ಯುವಕರ ಪೋಷಕರನ್ನು ಕರೆಸಿ ಕೌನ್ಸೆಲಿಂಗ್ ಮಾಡುತ್ತೇವೆ ಎಂದು ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ ಅವರು ಹೇಳಿದ್ದಾರೆ.