ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಅಕ್ಟೋಬರ್ 28ರಂದು ಬಿಡುಗಡೆ ಮಾಡುವುದಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಅಶ್ವಿನಿಯವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರು ಪ್ರೀತಿಯ ಕಾಣಿಕೆ ಎಂದಿದ್ದಾರೆ. ಈ ಸಾಕ್ಷ್ಯ ಚಿತ್ರದ ಬಗ್ಗೆ ಪುನೀತ್ ರಾಜ್ಕುಮಾರ್ ಅಪಾರ ಕನಸು ಕಟ್ಟಿಕೊಂಡಿದ್ದರು. ಕೊರೋನಾ ಲಾಕ್ಡೌನ್ ವೇಳೆ ಸುಮ್ಮನೆ ಮನೆಯಲ್ಲಿ ಕೂರದೇ ಕಾಡು, ಮೇಡು ಸುತ್ತಿ ಶೂಟಿಂಗ್ ಮಾಡಿದ್ದಾರೆ. ನಮ್ಮ ನಾಡಿನ ಕಾಡಿನ ಸಂಪತ್ತನ್ನು ಈ ಸಾಕ್ಷ್ಯಚಿತ್ರದಲ್ಲಿ ಪರಿಚಯಿಸುವ ಕೆಲಸ ಮಾಡಿದ್ದಾರೆ.
ದಟ್ಟ ಕಾಡಿನ ಮಧ್ಯೆ ‘ಗಂಧದ ಗುಡಿ’ ಡಾಕ್ಯುಮೆಂಟರಿಯನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯ, ವನ್ಯಜೀವಿ ಸಂಪತ್ತನ್ನು ಅದ್ಭುತವಾಗಿ ಸೆರೆಹಿಡಿಯಾಲಾಗಿದೆ. ಇದರಲ್ಲಿ ಅಪ್ಪು ಸಹ ಕಾಣಿಸಿಕೊಂಡಿದ್ದು, ಕರ್ನಾಟಕದ ಕಾಡು, ಮೇಡು ಅಲೆದು ಡಾಕ್ಯುಮೆಂಟ್ ಮಾಡಿದ್ದಾರೆ. ಟೀಸರ್ ಕೊನೆಯಲ್ಲಿ ಅಣ್ಣಾವ್ರ ಕಾಡು ಉಳಿಸಿ, ಪ್ರಾಣಿ ಸಂರಕ್ಷಿಸಿ ಎಂಬ ಗಂಧದ ಗುಡಿ ಡೈಲಾಗ್ ಕೇಳಿಸುತ್ತೆ. ಈ ಡಾಕ್ಯುಮೆಂಟ್ ಚಿತ್ರವನ್ನು ಖ್ಯಾತ ವೈಲ್ಡ್ ಲೈಫ್ ಛಾಯಾಗ್ರಾಹಕ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ.
ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ. pic.twitter.com/s3SRaeAZme
— Ashwini Puneeth Rajkumar (@Ashwini_PRK) July 15, 2022