ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ನಿರ್ವಾಹಕ ಪ್ರಯಾಣಿಕನನ್ನು ಒದ್ದು ರಸ್ತೆಗೆ ತಳ್ಳಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ಘಟನೆ ನಡೆದಿದೆ.
ಸಾಮಾಜಿಕ ತಾಣಗಳಲ್ಲಿ ಈ ದೃಶ್ಯ ವೈರಲ್ ಆಗಿದ್ದು, ಕಂಡಕ್ಟರ್ ನ ಅಮಾನವೀಯ ವರ್ತನೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.
ನಡೆದದ್ದೇನು..?
ಪ್ರಯಾಣಿಕ ಕಡಿದು ಬಸ್ ಹತ್ತಿದಾಗಲೇ ಕಂಡಕ್ಟರ್ ತಡೆದಿದ್ದಾನೆ. ಪ್ರಯಾಣಿಕನ ಕೊಡೆ ಕಿತ್ತೆಸೆದು ಬಸ್ ಒಳಗಡೆಯೇ ಕೈಯಿಂದ ಹಲ್ಲೆ ಮಾಡಲಾಗಿದೆ. ಪ್ರಯಾಣಿಕ ಬಸ್ ಇಳಿಯಲು ಒಪ್ಪದೇ ಇದ್ದಾಗ ಕಂಡಕ್ಟರ್ ಕಾಲಿನಿಂದ ಎದೆಗೆ ಒದ್ದಿದ್ದಾನೆ. ಪರಿಣಾಮ ಪ್ರಯಾಣಿಕ ರಸ್ತೆಗೆ ಬಿದಿದ್ದಾನೆ. ಬಳಿಕ ಆತನನ್ನ ಅಲ್ಲೇ ಬಿಟ್ಟು ಬಸ್ ಮುಂದಕ್ಕೆ ಚಲಿಸಿದೆ. ಸಾಮಾಜಿಕ ತಾಣಗಳಲ್ಲಿ ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದ್ದು, ನಿರ್ವಾಹಕನ ದುರ್ವರ್ತನೆ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
This is from #Mangalore, #Karnataka.
A #KSRTC government bus (KA.21.F.002) conductor was seen physically assaulting a passenger and kicking him out of the bus today at #Ishwaramanagala junction near #Puttur. Reason is yet to be known.@KSRTC_Journeys @sriramulubjp pic.twitter.com/wqu5A6rvgQ
— Hate Detector 🔍 (@HateDetectors) September 7, 2022
ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ KSRTC ಯ KA 21 F 0002 ಬಸ್ ನಿರ್ವಾಹಕನನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಯಾವುದೇ ಅಧಿಕಾರ ನಿರ್ವಾಹಕರಿಗಿರುವುದಿಲ್ಲ. ಇಲ್ಲಿ ನಿರ್ವಾಹಕ ಮಾಡಿರುವುದು ತಪ್ಪು. ಹೀಗಾಗಿ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ : KSRTC ಬಸ್ನಲ್ಲಿ ಹೋಗ್ತೀರಾ..? – ಈಗಲೇ ಈ ಸುದ್ದಿ ಓದಿ