ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸಂಬಂಧ ಇಂದು ಗುಜರಾತ್ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶ ನೀಡಲಿದೆ.
ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮನ್ನು ದೋಷಿ ಎಂದು ಪರಿಗಣಿಸಿ ಸೂರತ್ನ ನ್ಯಾಯಾಲಯ ನೀಡಿದ್ದ ತೀರ್ಪು ಮತ್ತು 2 ವರ್ಷದ ಕಾರಾಗೃಹ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಕೋಲಾರದಲ್ಲಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಮೋದಿ ಸಮುದಾಯಕ್ಕೆ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ಗುಜರಾತ್ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ದಾವೆ ಹೂಡಿದ್ದರು.
ಆ ದಾವೆ ಸಂಬಂಧ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಪರಿಗಣಿಸಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಿ ಅಲ್ಲಿವರೆಗೆ ಜಾಮೀನು ಮಂಜೂರು ಮಾಡಿತ್ತು.
2 ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ರಾಹುಲ್ ಗಾಂಧಿ ತಮ್ಮ ಲೋಕಸಭಾ ಸಂಸದ ಸ್ಥಾನದಿಂದಲೂ ಅನರ್ಹಗೊಂಡಿದ್ದರು.
ADVERTISEMENT
ADVERTISEMENT