ಕಾಂಗ್ರೆಸ್ನ ಪಾದಯಾತ್ರೆಯ ಪಾಲಿಟಿಕ್ಸ್ ಇದೀಗ ರಾಷ್ಟ್ರಮಟ್ಟಕ್ಕೂ ತಲುಪಿದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಚಿಂತನ ಶಿಬಿರದಲ್ಲಿ 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ. ಈ ಶಿಬಿರಲ್ಲಿಯೇ ಕಾಂಗ್ರೆಸ್ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
2024 ರ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಜನಸಾಮಾನ್ಯರೊಂದಿಗೆ ಸಂಪರ್ಕ ಸಾಧಿಸಲು ಪಾದಯಾತ್ರೆ ನಡೆಸುವ ಯೋಚನೆಯನ್ನು ಚಿಂತನ್ ಶಿಬಿರದಲ್ಲಿ ಚರ್ಚಿಸಲಾಗಿದೆ ಎಮದು ತಿಳಿದುಬಂದಿದೆ.
ಪಾದಯಾತ್ರೆಯ ಬಗ್ಗೆ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ನಿಂದ ನಡೆದ ಈ ಶಿಬಿರದಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಣದುಬ್ಬರ ಮತ್ತು ಆರ್ಥಿಕ ವಿಷಯಗಳ ಕುರಿತು ಸರ್ಕಾರದ ವಿರುದ್ಧ ಸಾಮೂಹಿಕ ಆಂದೋಲನ ಕಾರ್ಯಕ್ರಮವನ್ನು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.