ಕರ್ನಾಟಕದ 8 ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
‘ದಕ್ಷಿಣ ಕನ್ನಡ, ಉಡುಪಿ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ನಾಳೆಯೂ ಅಂದರೆ ಜುಲೈ 31ರಂದು ಕೂಡಾ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಬುಧವಾರ 4 ಜಿಲ್ಲೆಗಳಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಂದರೆ ಆಗಸ್ಟ್ 1ರ ಬೆಳಗ್ಗೆ 8.30ರವರೆಗೂ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ.
ADVERTISEMENT
ADVERTISEMENT