ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಣ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇವತ್ತು ಒಂದು ದಿನದ ಮಟ್ಟಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಇವತ್ತಿನ ಮಟ್ಟಿಗೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.