ಕೆರೆಗೆ ಈಜಲು ಹೋಗಿದ್ದ 3 ಜನ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ದ ಮಾವತ್ತೂರು ಕೆರೆಯಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಸಚಿನ್ (26), ಜಾವೇದ್ ಮುಲ್ಲಾ (26), ನಿರಂಜನ್ (26) ನೀರು ಪಾಲಾದ ಮೆಡಿಕಲ್ ವಿದ್ಯಾರ್ಥಿಗಳು.
ನಾಪತ್ತೆಯಾದ ಮೂವರನ್ನು ಸಾಗರ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ.
ಸೋಮವಾರ ಮಧ್ಯಾಹ್ನ ವಿದ್ಯಾರ್ಥಿಗಳು ಮಾವತ್ತೂರು ಕೆರೆಗೆ ಹೋಗಿದ್ದಾರೆ ಎನ್ನಲಾಗಿದೆ. ಕೆರೆಯ ದಂಡೆಯಲ್ಲಿ ಬೈಕ್ ಇದೆ. ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕನಕಪುರದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ಕೆರೆಯಲ್ಲಿ ಈಜಲು ತೆರಳಿದ ನಾಲ್ವರು ನೀರು ಪಾಲು